ಬೆಂಗಳೂರು: ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಗೋದ್ರೇಜ್ ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಬಿದ್ದು ವೈದ್ಯನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಯ 31 ವರ್ಷದ ವೈದ್ಯ ಪೃಥ್ವಿರಾಜ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ 7ಗಂಟೆ ಸುಮಾರಿಗೆ ದುರ್ಘಟನೆಗೆ ಈಡಾಗಿದ್ದಾರೆ. ದುರಂತದ ನಡೆದ ಗೋದ್ರೇಜ್ ಅಪಾರ್ಟ್ಮೆಂಟ್ ನ 11ನೆ ಮಹಡಿಗೆ ಮತ್ತು ಪೃಥ್ವಿರಾಜ್ ಬಿದ್ದಿದ್ದ ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಗೋದ್ರೆಜ್ ಅಪಾರ್ಟ್ ಮೆಂಟ್ ಗೆ ಪೋಷಕರು ಆಗಮಿಸಿ, ಮಗನ ಮೃತದೇಹ ನೋಡಿ ಕಣ್ಣೀರು ಹಾಕಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





