Breaking News

ಬಾಲಕಿ ಮೇಲೆ ಅತ್ಯಾಚಾರ : 20 ವರ್ಷ ಜೈಲು ಶಿಕ್ಷೆ, 80 ಸಾವಿರ ದಂಡ


ಮಂಡ್ಯ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 80 ಸಾವಿರ ದಂಡ ವಿಧಿಸಿ ಮಂಡ್ಯ ಎಡಿಜೆ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ.

ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ 03 ಜುಲೈ 2020ರ ರಾತ್ರಿ 10 ಗಂಟೆಗೆ ಕೃತ್ಯ ನಡೆದಿತ್ತು. ಅಶೋಕ್ ಶಿಕ್ಷೆಗೆ ಒಳಪಟ್ಟ ಅಪರಾಧಿ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿತ್ತು. ಮಠವೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಅಪರಾಧಿ ಅಶೋಕ್, ಅಪ್ಪ-ಅಮ್ಮ ಇಲ್ಲದೆ ಮಾವನ ಆಶ್ರಯದಲ್ಲಿದ್ದ ನೊಂದ ಬಾಲಕಿ ಇದ್ದಳು. ಮಠವೊಂದರ ವಸತಿ ಗೃಹದಲ್ಲಿ ಬಾಲಕಿ ವಾಸವಿದ್ದಳು. ದಂಡ ಕಟ್ಟಲು ಸಾಧ್ಯವಾಗದಿದ್ದರೆ ಹೆಚ್ಚುವರಿ 4 ವರ್ಷ ಕಠಿಣ ಶಿಕ್ಷೆ ವಿಧಿಸಿ ಮಂಡ್ಯ ಕೋರ್ಟ್ ಆದೇಶ ಹೊರಡಿಸಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *