Breaking News

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್‌ಗೆ ಭೇಟಿ


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್‌ಗೆ ಭೇಟಿ ನೀಡಲಿದ್ದು, 21,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಅಷ್ಟೇ ಅಲ್ಲದೇ, ನಾಳೆಯೂ ಕೂಡ ಮೋದಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ  ಪ್ರಕಟಣೆ ತಿಳಿಸಿದೆ.

ಜೂನ್ 18 ರಂದು ಬೆಳಿಗ್ಗೆ 9:15 ಕ್ಕೆ, ಪಾವಗಡ ಬೆಟ್ಟದಲ್ಲಿರುವ ಶ್ರೀ ಕಾಳಿಕಾ ಮಾತೆಯ ಪುನರಾಭಿವೃದ್ಧಿ ದೇವಾಲಯಕ್ಕೆ ಪ್ರಧಾನಿ ಭೇಟಿ ನೀಡಿ ಉದ್ಘಾಟನೆ ಮಾಡಲಿದ್ದಾರೆ, ನಂತರ 11:30 ಕ್ಕೆ ವಿರಾಸತ್ ವನಕ್ಕೆ ಭೇಟಿ ನೀಡಲಿದ್ದಾರೆ. ನಂತರ, 12:30 ರ ಸುಮಾರಿಗೆ ವಡೋದರಾದಲ್ಲಿ ಗುಜರಾತ್ ಗೌರವ್ ಅಭಿಯಾನದಲ್ಲಿ ಭಾಗವಹಿಸಲಿದ್ದು, ಸುಮಾರು 21,000 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *