ದಾವಣಗೆರೆ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ತನ್ನ ವಾದವನ್ನು ಮಂಡಿಸಿದ್ದು, ಡಿಪಿಆರ್ ಅನುಮೋದನೆಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಕುರಿತು ಸುಪ್ರೀಂಕೋರ್ಟ್ ನಲ್ಲಿ ಯಾವುದೇ ತಡೆಯಾಜ್ಞೆ ಇಲ್ಲ, ಸಿಡ್ಲೂಎಮ್‍ಎ ಸಮಿತಿಗೆ ಸಂಪೂರ್ಣ ಪರಮಾಧಿಕಾರ ಇದೆ. ಮುಂದಿನ ವಾರ ಸಿಡ್ಲೂಎಮ್‍ಎ ಸಮಿತಿ ಸಭೆ ನಡೆಯುವ ಸಾಧ್ಯತೆ ಇದ್ದು ಈಗಾಗಲೇ ನಮ್ಮ ವಾದವನ್ನು ಮಂಡಿಸಿದ್ದೇವೆ. ತಮಿಳುನಾಡು ಏನೇ ಆಕ್ಷೇಪಣೆ ಎತ್ತಿದರೂ ಡಿ.ಪಿ.ಆರ್ ಅನುಮೋದನೆಯಾಗುವ ವಿಶ್ವಾಸವಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





