ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ನಾಲ್ಕನೆ ಅಲೆ ಆತಂಕ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 12,847 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು ಒಂದೇ ದಿನದಲ್ಲಿ 14 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,817ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 63,063 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7,985 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,74,712 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news





