Breaking News

ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಶೇಖ್ ಹುಸೇನ್ ಬಂಧನ


ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಶೇಖ್ ಹುಸೇನ್ ಅವರನ್ನು ಗುರುವಾರ ನಾಗ್ಪುರದಲ್ಲಿ ಗುರುವಾರ ಬಂಧಿಸಲಾಗಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸಿದ್ದನ್ನು ವಿರೋಧಿಸಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ನಾಗ್ಪುರದ ಮಾಜಿ ಕಾಂಗ್ರೆಸ್ ಅಧ್ಯಕ್ಷ ಶೇಖ್ ಹುಸೇನ್ ಅವರು ಪ್ರಧಾನಿ ಮೋದಿಯನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ನಾಗ್ಪುರ ಬಿಜೆಪಿ ಅಧ್ಯಕ್ಷ ವಿನೋದ ದಾಮೋದರ ಕನ್ಹರೆ ಅವರು ನೀಡಿದ ದೂರಿನ ಆಧಾರದ ಮೇಲೆ ಶೇಖ್ ಹುಸೇನ್ ವಿರುದ್ಧ ಉದ್ದೇಶಪೂರ್ವಕ ಅವಮಾನ, ಉದ್ದೇಶಪೂರ್ವಕವಾಗಿ ಶಾಂತಿ ಕದಡುವ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿತ್ತು. ಇಂದು ಕಾಂಗ್ರೆಸ್ ನಾಯಕನನ್ನು ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

Share News

About BigTv News

Check Also

ನಕಲಿ ದಾಖಲೆ ಮೂಲಕ ನಿವೇಶನ ಕಬಳಿಕೆ ; ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಮಾಜಿ ಸಂಸತ್ ಸದಸ್ಯೆ ತೇಜಸ್ವಿನಿ ಗೌಡ ಅವರ ಸಹೋದರನಿಗೆ ಸೇರಿದ ನಿವೇಶನವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ ಪ್ರಕರಣದಲ್ಲಿ, ಆರ್.ಎಂ.ವಿ. …

Leave a Reply

Your email address will not be published. Required fields are marked *