ಬೆಂಗಳೂರು: ಚುನಾವಣಾ ತಕರಾರು ಅರ್ಜಿ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೂ.24ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಆದೇಶಿಸಿದೆ.
ಪ್ರಜ್ವಲ್ ರೇವಣ್ಣ ಅವರ ಆಯ್ಕೆ ಅಸಿಂಧುಗೊಳಿಸಬೇಕೆಂದು ಕೋರಿ ಪರಾಜಿತ ಅಭ್ಯರ್ಥಿಗಳಾದ ಎ.ಮಂಜು ಮತ್ತು ಜಿ.ದೇವರಾಜೇಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಗಳನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





