ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಜೂ.18ರಂದು (ಶನಿವಾರ) ಬೆಳಿಗ್ಗೆ 11.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಪ್ರಕಟಿಸಲಿದ್ದು ಬಳಿಕ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.
ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಶನಿವಾರ ಬೆಳಿಗ್ಗೆ 11.30ಕ್ಕೆ ಸಚಿವ ನಾಗೇಶ್ ಅವರು ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದು ಬಳಿಕ ಮಂಡಳಿಯ ವೆಬ್‌ಸೈಟ್ www.karresults.nic.in ಸ್‌ಎಸ್‌ಎಲ್‌ಸಿ ಫಲಿತಾಂಶದ ಮಾದರಿಯಲ್ಲೇ ಪಿಯುಸಿ ಫಲಿತಾಂಶವನ್ನೂ ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.
bigtvnews | Hubli Dharwad News | Kannada News | Karnataka News Hubli News | News In Hubli | Local news





