Breaking News

ರಾಜ್ಯದಲ್ಲಿ ಮತ್ತೆ ಮುಂದುವರೆದ ಮಹಾಮಾರಿ ಅಟ್ಟಹಾಸ


ಬೆಂಗಳೂರು: ರಾಜ್ಯದಲ್ಲಿ ಸತತ ಮೂರು ದಿನಗಳ ಬಳಿಕ ಕೊರೋನಾ ಸೋಂಕು ಹೊಸ ಪ್ರಕರಣಗಳು ಕೊಂಚ ಇಳಿಕೆಯಾಗಿದ್ದು, ಶುಕ್ರವಾರ 634 ಜನರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ, ಒಂದೂವರೆ ತಿಂಗಳ (47 ದಿನ) ಬಳಿಕ ಸೋಂಕಿತರ ಸಾವು 2ಕ್ಕೆ ಹೆಚ್ಚಳವಾಗಿದೆ.

ರಾಜ್ಯದಲ್ಲೀಗ 4528 ಸಕ್ರಿಯ ಸೋಂಕಿತರಿದ್ದಾರೆ. ಆದರೆ, ಅವರ ಪೈಕಿ 32 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದು, ಉಳಿದಂತೆ 4496 ಮಂದಿ ಮನೆಯಲ್ಲಿಯೇ ಆರೈಕೆಯಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ 503 ಮಂದಿ ಗುಣಮುಖರಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ 23 ವರ್ಷದ ಯುವಕ, ಬೆಂಗಳೂರಿನಲ್ಲಿ 83 ವರ್ಷದ ವೃದ್ಧೆ ಸೋಂಕಿನಿಂದ ಸಾವಿಗೀಡಾಗಿದ್ದಾರೆ. 22,586 ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ 2.8ರಷ್ಟು ದಾಖಲಾಗಿದೆ. ಗುರುವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳನ್ನು 1500 ಕಡಿಮೆ ನಡೆಸಲಾಗಿದೆ. ಹೀಗಾಗಿ, ಹೊಸ ಪ್ರಕರಣಗಳು ಕೂಡಾ 199 ಇಳಿಕೆಯಾಗಿವೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *