Breaking News

ಮಾಜಿ ಸಚಿವ ಎಂ.ರಘುಪತಿ ನಿಧನ


ಬೆಂಗಳೂರು: ಮಾಜಿ ಸಚಿವ ಎಂ.ರಘುಪತಿ ಅವರು ಶನಿವಾರ ಮುಂಜಾನೆ ತಮ್ಮ ಮಲ್ಲೇಶ್ವರಂ ನಿವಾಸದಲ್ಲಿ ನಿಧನ ಹೊಂದಿದರು.

ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಎಂ.ರಘುಪತಿ ಅವರು ಮಲ್ಲೇಶ್ವರಂ ಮತ್ತು ಶಿವಾಜಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದು ಶಾಸಕರಾಗಿದ್ದರು.
ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಅವರ ಸಂಪುಟದಲ್ಲಿ ಎಂ.ರಘುಪತಿ ಅವರು ಶಿಕ್ಷಣ ಸಚಿವರಾಗಿದ್ದರು. ಜನತಾ ಪರಿವಾರದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ರಘುಪತಿ ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಎನ್ ಟಿ ರಾಮ ರಾವ್ ಗೆ ಆತ್ಮೀಯರಾಗಿದ್ದರು. ಇತ್ತೀಚಿನ ದಿನಗಳಲ್ಲಿ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *