Breaking News

ಪೊಲೀಸ್ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು


ಶ್ರೀನಗರ: ಪೊಲೀಸ್ ಅಧಿಕಾರಿಯೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಬೆಳಕಿದೆ ಬಂದಿದೆ.

ಶುಕ್ರವಾರ ಸಂಜೆಯ ಬಳಿಕ ಸಬ್ ಇನ್ಸ್‌ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಅವರು ಮನೆಯ ಪಕ್ಕದ ಗದ್ದೆಯ ಬಳಿ ಹೋಗಿದ್ದರು. ಅಲ್ಲಿ ಅವರ ಮೇಲೆ ಉಗ್ರರು ಪಿಸ್ತೂಲ್ ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಕಾಶ್ಮೀರ್ ಜೋನ್ ಪೊಲೀಸರು ತಿಳಿಸಿದ್ದಾರೆ. ಸಬ್ ಇನ್ಸ್‌ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಅವರು ಸಿಟಿಸಿ ಲೆತ್‌ಪೋರಾದ ಐಆರ್‌ಪಿ 23ನೇ ಬೆಟಾಲಿಯನ್‌ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *