ಹುಬ್ಬಳ್ಳಿ: ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು,ವಾಣಿಜ್ಯನಗರಿ ಹುಬ್ಬಳ್ಳಿಯ ವಿದ್ಯಾರ್ಥಿನಿ ಮೂರನೇ ರ್ಯಾಂಕ್ ಪಡೆಯುವ ಮೂಲಕ ಸಾಧನೆ ಮಾಡಿದ್ದು, ಎಸ್.ಜೆ.ಎಂ.ವಿ.ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಕಾಲೇಜಿನ ವಿದ್ಯಾರ್ಥಿನಿಗೆ ಸಾನಿಕಾ ಗುಂಡೂರಾವ್ ಮೂರನೇ ರ‌್ಯಾಂಕ್ ಪಡೆದ ವಿದ್ಯಾರ್ಥಿನಿಯಾಗಿದ್ದು, ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಕಾಲೇಜಿಗೆ ಆಗಮಿಸಿದ್ದು, ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ವಾದ್ಯಗಳೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದ್ದು, ಕಾಲೇಜಿನ ಆವರಣದಲ್ಲಿ ಸಂಭ್ರಮ ಮನೆ ಮಾಡಿತ್ತು.
ಇನ್ನೂ 593 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ರ‌್ಯಾಂಕ್ ಪಡೆದಿದ್ದು, ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜು ಹಾಗೂ ಕುಟುಂಬಸ್ಥರಲ್ಲಿ ಸಂತೋಷ ಮನೆ ಮಾಡಿದೆ. ಅಲ್ಲದೇ ಕಾಲೇಜಿನಲ್ಲಿ ಗುರು ವೃಂದವು ಸಿಹಿ ತಿನಿಸಿ ಸಂಭ್ರಮಿಸಿ ಸಾನಿಕಾ ಸಾಧನೆಯನ್ನು ಕೊಂಡಾಡಿದರು. ಅಲ್ಲದೇ ಕಾಲೇಜಿನ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟುವ ಮೂಲಕ ಅಭಿನಂದನೆ ಸಲ್ಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





