Breaking News

ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ : ವಿದ್ಯಾರ್ಥಿ ಆತ್ಮಹತ್ಯೆ


ಕುಮಟಾ : ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಲನಗದ್ದೆ ಎಂಬಲ್ಲಿ ನಡೆದಿದೆ.

ಕುಮಟಾ ತಾಲೂಕಿನ ಹೊಲನಗದ್ದೆ ಕಡ್ಲೆ ನಿವಾಸಿ ಪ್ರಣಮ್ ಈಶ್ವರ ನಾಯ್ಕ (18) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಪಿಯುಸಿ ಫಲಿತಾಂಶದಲ್ಲಿ ಪ್ರಣವ್ ಫೇಲ್ ಆಗಿದ್ದು, ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಲಾಗಿದೆ. ತಂದೆ ಆಟೋ ಚಾಲಕನಾಗಿದ್ದು, ಒಬ್ಬನೇ ಮಗನಾದ ಈತನನ್ನು ಬಹಳ ಪ್ರೀತಿಯಿಂದ ಬೆಳೆಸಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *