Breaking News

ಮಹಿಳೆಯರು ಸಂಘಟಿತರಾಗಬೇಕು ಚಂದುನವರ ಕರೆ

ಧಾರವಾಡ: ಮಹಿಳೆಯರು ಸಮಾಜದಲ್ಲಿ ಗುರುತಿಸಿಕೊಳ್ಳಲು ಆಸಕ್ತಿಯಿಂದ ಸಂಘಟನಾತ್ಮಕವಾಗಿ ಕಾರ್ಯ ಮಾಡಬೇಕು ಎಂದು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಜೆ.ಎಂ ಚಂದುನವರ ತಿಳಿಸಿದರು.

ಧಾರವಾಡ ಕಮಲಾಪುರದ ಪ್ರಮೀಳಾ ಕೌಶಲ್ಯ ಅಭಿವೃದ್ಧಿ ಸಂಸ್ಥೆ ವತಿಯಿಂದ ಉಚಿತ ಬ್ಯಾಗ್ ತಯಾರಿಕಾ ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಹಿಳೆಯರು ಸಂಘಟಿತರಾಗಬೇಕು ಅಂದಾಗ ಸಮಾಜಕ್ಕೆ ಮಹಿಳೆಯರ ಶಕ್ತಿ ಏನು ಎಂಬುದು ತಿಳಿಯುತ್ತದೆ. ಪ್ರಮೀಳಾ ಕೌಶಲ್ಯ ಅಭಿವೃದ್ಧಿ ಸಂಸ್ಥೆ ಮಹಿಳೆಯರನ್ನು ಸಂಘಟಿಸಲು ಉತ್ತಮ ಕಾರ್ಯ ಮಾಡುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರಾದ ಎಚ್.ಎಚ್ ಕುಕನೂರು, ಸಮಾಜ ಸೇವಕಿ ಮಹಾದೇವಿ ಮಾನನವರ, ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಕಮತಿ, ಪ್ರಮೀಳಾ ಕೌಶಲ್ಯ ಅಭಿವೃದ್ಧಿ ಸಂಸ್ಥೆ ಸಂಸ್ಥೆಯ ಮುಖ್ಯಸ್ಥರಾದ ಪ್ರೀಯಾ ಖೋದಾನಪುರ ಸೇರಿದಂತೆ ಹಲವರು ಇದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *