Breaking News

ಕ್ಯಾಂಟರ್‌ , ಕಾರ್ ಡಿಕ್ಕಿ: ತಂದೆ, ಮಗ ಸಾವು


ಆಲೂರು: ಕ್ಯಾಂಟರ್‌ – ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಆಲೂರು-ಈಶ್ವರಹಳ್ಳಿ ಕೂಡಿಗೆ ಸಮೀಪ ನಡೆದಿದೆ.

ತಮಿಳುನಾಡು ಮೂಲದ ಅಂಜನಪ್ಪ (40), ಕಾರ್ತಿಕ್ (17) ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ. 2 ಕಾರಿನಲ್ಲಿ ಒಟ್ಟು 10 ಜನ ಧರ್ಮಸ್ಥಳಕ್ಕೆಂದು ತೆರಳುತ್ತಿದ್ದರು. ಈ ವೇಳೆ ಮಾರುತಿ 800 ಕಾರಿಗೆ ಕ್ಯಾಂಟರ್‌ ಢಿಕ್ಕಿಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಇನ್ನುಳಿದಂತೆ ಘಟನೆಯಲ್ಲಿ ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಆಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆಲೂರು ವೃತ್ತ ನಿರೀಕ್ಷಕ ಹೇಮಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *