ಬೆಂಗಳೂರು: ಜೂನ್.21ರಂದು ಮೈಸೂರಿನಲ್ಲಿ ನಡೆಯಲಿರುವಂತ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ. ಈ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುವಂತ ಎಲ್ಲರಿಗೂ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ.
ಹೀಗಾಗಿ, ಸಿಎಂ ಬಸವರಾಜ ಬೊಮ್ಮಾಯಿ ಕೂಡ ಇಂದು ಕೋವಿಡ್ ಪರೀಕ್ಷೆಗೆ ಒಳಗಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಆರ್ ಟಿ ನಗರದ ನಿವಾಸಕ್ಕೆ ಆಗಮಿಸಿದಂತ ಆರೋಗ್ಯ ಸಿಬ್ಬಂದಿಗಳು, ಅವರ ಸ್ವಾಪ್ ಅನ್ನು ಪರೀಕ್ಷೆಗಾಗಿ ಕೊಂಡೊಯ್ದರು. ಈ ಮೂಲಕ ಕೋವಿಡ್ ಪರೀಕ್ಷೆಗೆ ಸಿಎಂ ಬೊಮ್ಮಾಯಿ ಒಳಗಾದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





