Breaking News

ಸರ್ಕಾರದ ನಿರ್ಧಾರಕ್ಕೆ ಕಿಡಿಕಾರಿದ ಡಿಕೆಶಿ


ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿಲಿದ್ದಾರೆ ಎಂದು ಮೋದಿ ಪ್ರಯಾಣಿಸುವ ಮಾರ್ಗದ ಕಾಲೇಜುಗಳಿಗೆ ರಜೆ ನೀಡಿದ್ದು ಯಾಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಪ್ರಧಾನಿ ಮೋದಿ ಪ್ರಯಾಣಿಸುವ ರಸ್ತೆಗಳಲ್ಲಿ ಕಾಲೇಜಿಗೆ ರಜೆ ನೀಡಲಾಗಿದೆ. ಕಾಲೇಜುಗಳಿಗೆ ಯಾಕೆ ರಜೆ ಕೊಟ್ಟಿದ್ದಾರೆ? ವಿದ್ಯಾರ್ಥಿಗಳು ಗಲಾಟೆ ಮಾಡ್ತಾರಾ? ಅವರನ್ನು ಅನುಮಾನದಿಂದ ನೋಡುತ್ತಿರುವುದಾದರೂ ಯಾಕೆ? ವಿದ್ಯಾರ್ಥಿಗಳು ಭಯೋತ್ಪಾದಕರಾ? ಎಂದು ಕಿಡಿ ಕಾರಿದ್ದಾರೆ. ಪ್ರಧಾನಿಯವರಿಗೆ ಏನು ಭದ್ರತೆ ಕೊಡಬೇಕು ಕೊಡಿ. ಹಾಗಂತ ಅವರು ಹೋಗುವ ರಸ್ತೆಯಲ್ಲಿರುವ ಕಾಲೇಜುಗಳಿಗೆ ರಜೆ ಕೊಡುವುದು ಸರಿಯಲ್ಲ. ವಿದ್ಯಾರ್ಥಿಗಳನ್ನು ಅನುಮಾನದಿಂದ ಕಂಡು ಅವಮಾನಿಸುವುದು ಯಾಕೆ? ರೋಡಲ್ಲಿ ಏನು ಭದ್ರತೆ ಕೊಡಬೇಕು ಸರ್ಕಾರ ಕೊಡಲಿ. ರೋಡ್ ಶೋ ಮಾಡಿ ರಾಜಕೀಯ ಮಾಡಿ ಅದನ್ನು ಬಿಟ್ಟು ಹೀಗೆ ಮಾಡುತ್ತಿರುವುದು ಯಾಕೆ? ಎಂದು ಪ್ರಶಿಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *