Breaking News

ಪ್ರಧಾನಿಯಿಂದ ಮೈಸೂರುನಲ್ಲಿ ನಮೋ ಯೋಗ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜರುಗಿದ ವಿಶ್ವ ಯೋಗ ದಿನಾಚರಣೆಯ ಸಮಾರಂಭ ಚರಿತ್ರಾರ್ಹ ಕ್ಷಣಗಳಿಗೆ ವೇದಿಕೆ ಆಯಿತು. ಮೋದಿ ನೇತೃತ್ವದಲ್ಲಿ 45 ನಿಮಿಷ ಕಾಲ ನಡೆದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ 15 ಸಾವಿರ ಜನ ಯೋಗ ಮಾಡಿ ಗಮನ ಸೆಳೆದರು.

ಮಂಗಳವಾರ ಬೆಳಗ್ಗೆ 7ರಿಂದ 7.45ರ ವರೆಗೆ ಒಟ್ಟು 19 ಆಸನಗಳು ಪ್ರದರ್ಶನಗೊಂಡವು. ಇದರಲ್ಲಿ ಮೊದಲ ಒಂದು ನಿಮಿಷ ಪ್ರಾರ್ಥನೆ, 4 ನಿಮಿಷ ಚಲನಕ್ರಿಯೆ, 25 ನಿಮಿಷ ತಾಡಾಸನ, ವೃಕ್ಷಾಸನ, ಪಾದಹಸ್ತಾಸನ-1, ಪಾದಹಸ್ತಾಸನ-2, ಅರ್ಧಚಕ್ರಾಸನ, ತ್ರಿಕೋನಾಸನ, ಸಮದಂಡಾಸನ, ಭದ್ರಾಸನ, ವಜ್ರಾಸನ, ಅರ್ಧಉಷ್ಟ್ರಾಸನ, ಉಷ್ಟ್ರಾಸನ, ಶಶಂಕಾಸನ, ಉತ್ಥಾನ ಮಂಡೂಕಾಸನ, ವಕ್ರಾಸನ, ಮಕರಾಸನ, ಸರಳ ಭುಜಂಗಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಪವನಮುಕ್ತಾಸನ, ಶವಾಸನ ಪ್ರದರ್ಶನ ನಡೆಯಲಿವೆ. ಬಳಿಕ 14 ನಿಮಿಷ ಪ್ರಾಣಾಯಾಮ, ಧ್ಯಾನ, ಸಂಕಲ್ಪ. ಒಂದು ನಿಮಿಷ ಶಾಂತಿಮಂತ್ರ, ಎರಡು ನಿಮಿಷ ಸಂಕಲ್ಪ… ಹೀಗೆ ಒಟ್ಟು 19 ಆಸನಗಳ ಪ್ರದರ್ಶನ ನಡೆಯಿತು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *