Breaking News

ಆಕ್ಸಿಜನ್​​ ನೀಡದ ಮೋದಿ ಈಗ ಯೋಗ ಮಾಡಲಿಕ್ಕೆ ಬರ್ತಿದ್ದಾರೆ : ಸಿದ್ದರಾಮಯ್ಯ


ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಕರ್ನಾಟಕ ಪ್ರವಾಸವನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಕುಮಾರಕೃಪಾದ ಸರ್ಕಾರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕೊರೊನಾ ಸಮಯದಲ್ಲಿ ಆಕ್ಸಿಜನ್​​ ನೀಡದ ಮೋದಿ ಈಗ ಯೋಗ ಮಾಡಲಿಕ್ಕೆ ಬರ್ತಿದ್ದಾರೆ ಎಂದು ಕಿಡಿಕಾರಿದರು.

ಇವತ್ತು ಮೋದಿ ಅವರು ಅಂಬೇಡ್ಕರ್ ವಿವಿ ಕಟ್ಟಡವನ್ನು ಉದ್ಘಾಟನೆ ಮಾಡ್ತಿದ್ದಾರೆ. ಇದನ್ನ ಜಾರಿಗೆ ತಂದಿದ್ದು ಯಾರು? ನಾವು. ನಮ್ಮ ಅವಧಿಯಲ್ಲೇ ಜಮೀನು ‌ಕೊಟ್ಟು ತಂದಿದ್ದು, ಈಗ ಅದನ್ನು ಉದ್ಘಾಟನೆ ಮಾಡ್ತಿದ್ದಾರೆ. ಮೈಸೂರು ಬೆಂಗಳೂರು ಅಷ್ಟಪಥದ ರಸ್ತೆ ಮಾಡಿದ್ದು ಯಾರು? ನಾನು ನಾನು ಅಂತ ಸಂಸದ ಪ್ರತಾಪ್ ಸಿಂಹ ಓಡಾಡ್ತಿದ್ದಾರೆ. ಪ್ರಾಜೆಕ್ಟ್ ಅಪ್ರೂವ್ ಮಾಡಿದ್ದು ಆಸ್ಕರ್ ಫರ್ನಾಂಡಿಸ್. ಎಚ್ ಸಿ ಮಹದೇವಪ್ಪ ಕಾಳಜಿಯಿಂದ ರಸ್ತೆ ಆಗ್ತಿದೆ. ಈಗ ಪ್ರತಾಪ್ ಸಿಂಹ ನನ್ನದು ಅಂತ ಓಡಾಡ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *