Breaking News

ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು


ತುಮಕೂರು: ದೇವಾಲಯದ ಸಮೀಪದಲ್ಲಿರುವ ಕಲ್ಯಾಣಿಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಬಾಲಕನನ್ನು ತರುಣ್ (16 ವರ್ಷ) ಎಂದು ಗುರುತಿಸಲಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿಯ ಲಕ್ಕನಹಳ್ಳಿ ಗ್ರಾಮದ ನಾಗಣ್ಣ ಎಂಬುವರ ಮಗನಾದ ಈತ ತಾಯಿಯೊಂದಿಗೆ ದೇಗುಲಕ್ಕೆ ಬಂದಿದ್ದ. ಕಲ್ಯಾಣಿ ಸಮೀಪ ತಾಯಿ ಗಂಗೆ ಪೂಜೆಯಲ್ಲಿ ನಿರತರಾಗಿದ್ದಾಗ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.‌ ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಠಾಣೆ ಸಿಬ್ಬಂದಿ ಹಾಗೂ ಪೊಲೀಸರು ಕಲ್ಯಾಣಿಯಿಂದ ಶವ ಮೇಲೆತ್ತಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *