Breaking News

ಪ್ರವಾಹ ಬಂದಿದ್ದಾಗ ಬಾರದ ಪ್ರಧಾನಿಗೆ ಈಗ ರಾಜ್ಯದ ನೆನಪಾಗಿದೆ : ಸಿದ್ದರಾಮಯ್ಯ ಲೇವಡಿ


ಬೆಂಗಳೂರು: ‘2019 ಮತ್ತು ನಂತರದ ಎರಡು ವರ್ಷ ರಾಜ್ಯದಲ್ಲಿ ಭಾರಿ ಪ್ರಮಾಣದ ಪ್ರವಾಹ ಬಂದಿದ್ದಾಗ ಬಾರದ ಪ್ರಧಾನಿ ನರೇಂದ್ರ ಮೋದಿಗೆ ಈಗ ರಾಜ್ಯದ ನೆನಪಾಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ
ಸಿದ್ದರಾಮಯ್ಯ ಲೇವಡಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಮೋದಿ ಅವರಿಂದ ರಾಜ್ಯಕ್ಕೆ ಯಾವೆಲ್ಲಾ ಅನ್ಯಾಯ ಆಗಿದೆ, ಜನದ್ರೋಹ ಆಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಇಷ್ಟೆಲ್ಲ ಅನ್ಯಾಯ ಮಾಡಿ ಮೈಸೂರಿಗೆ ಬಂದು ಯೋಗ ಮಾಡುತ್ತಿದ್ದಾರೆ’ ಎಂದರು.’ಮೈಸೂರು ಬ್ಯಾಂಕ್‌, ಕಾರ್ಪೋರೇಷನ್‌ ಬ್ಯಾಂಕ್‌, ಸಿಂಡಿಕೇಟ್‌ ಬ್ಯಾಂಕ್‌, ವಿಜಯಾ ಬ್ಯಾಂಕ್‌ನ್ನು ಬೇರೆ ಬ್ಯಾಂಕ್‌ಗಳ ಜೊತೆ ವಿಲೀನ ಮಾಡಿದ್ದು ಯಾರು? ಬೇರೆ ಬ್ಯಾಂಕ್‌ಗಳೊಂದಿಗೆ ವಿಲೀನವಾದ ನಂತರ ಅವುಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗುತ್ತಿದೆಯೇ? ಇದು ರಾಜ್ಯಕ್ಕೆ ಮಾಡಿರುವ ದೊಡ್ಡ ಅವಮಾನ’ ಎಂದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *