Breaking News

ಭಾರತದ ಪ್ರಗತಿಯಲ್ಲಿ ಮೋದಿ ಶ್ರೀಕೃಷ್ಣನ ಅವತಾರದಲ್ಲಿ ಬಂದಿದ್ದಾರೆ : ಶ್ರೀರಾಮುಲು

ಕೊಪ್ಪಳ: ಮಹಾಭಾರತದಲ್ಲಿ ಶ್ರೀ ಕೃಷ್ಣ ಹೇಗೆ ಅವತಾರ ತಾಳಿದ್ದನೋ ಹಾಗೆ ಭಾರತದ ಪ್ರಗತಿಯಲ್ಲಿ ಮೋದಿ ಶ್ರೀಕೃಷ್ಣನ ಅವತಾರದಲ್ಲಿ ಬಂದಿದ್ದಾರೆ ಎಂದು ಸಚಿವ ಶ್ರೀರಾಮುಲು ಅವರು ಹೇಳಿದರು.

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಸುದ್ದಿಗಾರರ ಜೊತೆ ಮಾತನಾಡಿ, ನವ ಭಾರತ ನಿರ್ಮಾಣಕ್ಕೆ ಮೋದಿ ಬಹಳ ಶ್ರಮಿಸುತ್ತಾರೆ. ಮೋದಿ ಜನಪ್ರೀಯತೆ ಸಹಿಸದೆ ಸಿದ್ದರಾಮಯ್ಯ ಅವರು ಮೂರ್ಖರ ರೀತಿ ಸರಣಿ ಟ್ವೀಟ್ ಮಾಡುತ್ತಿದ್ದಾರೆ. ಮೋದಿ ಎಲ್ಲದಕ್ಕೂ ಉತ್ತರ ಕೊಟ್ಟಿದ್ದಾರೆ‌. ಅಧಿಕಾರಕ್ಕೆ ಬರುವುದಿಲ್ಲ ಎಂಬ ಹತಾಶೆ ಭಾವನೆಯಿಂದ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ ಎಂದರು. ನಿಮ್ಮ ಪ್ರಧಾನಿ ಮನ್ ಕೀ ಬಾತ್ ಮಾಡಿದ ಉದಾಹರಣೆ ಇದೆಯಾ? ಕಾಂಗ್ರೆಸ್ ಪ್ರಧಾನಿ ದೆಹಲಿಗೆ ಸೀಮಿತ. ನಮ್ಮ ಪ್ರಧಾನಿ ಹಳ್ಳಿ ಹಳ್ಳಿಗೂ ತಲುಪಿದ್ದಾರೆ. ಗ್ರಾಪಂ ಸದಸ್ಯನ ಜೊತೆ ಮಾತನಾಡುತ್ತಿದ್ದಾರೆ ಎಂದರು. ಅಗ್ನಿಪಥ್ ಯೋಜನೆ ವಿರುದ್ದ ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದ್ದಾರೆ. ದೇಶದ ಸೈನಿಕನಾದರೆ, ಅವನಿಗೆ ಅವನದೆಯಾದ ಘನತೆ ಬರತ್ತದೆ ಎಂದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *