ಒಡಿಶಾದ ಖ್ಯಾತ ಕಿರುತೆರೆ ನಟಿ ರಶ್ಮಿರೇಖಾ ಓಜಾ ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಲ್ಲಿನ ನಯಪಲ್ಲಿಯಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ನಟಿಯ ಶವ ಪತ್ತೆಯಾಗಿದ್ದು, ಸಾವಿಗೆ ಸರಿಯಾದ ಕಾರಣ ಈವರೆಗೂ ತಿಳಿದುಬಂದಿಲ್ಲ.
ಇದರ ನಡುವೆ ರಶ್ಮಿ ಸಾವಿನ ಬಗ್ಗೆ ಅನೇಕ ಅನುಮಾನ ವ್ಯಕ್ತವಾಗಿದೆ. ಜೊತೆಗೆ ರಶ್ಮಿರೇಖಾ ಸಾವಿನ ಹಿಂದೆ ಬಾಯ್‌ಫ್ರೆಂಡ್ ಸಂತೋಷ್ ಕೈವಾಡವಿದೆ ಎಂದು ನಟಿಯ ತಂದೆ ಆರೋಪಿಸಿದ್ದಾರೆ. ಆದರೆ ಸಾವಿಗೆ ಪ್ರೇಮ ವೈಫಲ್ಯ ಕಾರಣ ಎನ್ನಲಾಗುತ್ತಿದ್ದು, ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





