ಬೆಂಗಳೂರು: ಪ್ರವಾಹ ಬಂದಾಗ, ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ನೀಡದ ಪ್ರಧಾನಿ ಮೋದಿ, ಈಗ ಯೋಗ ಮಾಡಲು ರಾಜ್ಯಕ್ಕೆ ಬಂದಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ದೇಶ ಕೊರೊನಾ ಸೋಂಕನ್ನು ಯಶಸ್ವಿಯಾಗಿ ಎದುರಿಸಿದೆ ಎಂದರೆ ಅದಕ್ಕೆ ಕಾರಣ ಪ್ರಧಾನಿ ಮೋದಿ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ಕೋವಿಡ್ ಅನ್ನು ಇಡೀ ದೇಶದಲ್ಲಿ ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದರೆ ಅದಕ್ಕೆ ಪ್ರಧಾನಿ ಮೋದಿ ಕಾರಣ. ಕೋವಿಡ್ ನಿರ್ವಹಣೆಗಾಗಿ ಕೇಂದ್ರ ಸರ್ಕಾರದಿಂದ ಸಾವಿರಾರು ಕೋಟಿ ರೂಪಾಯಿ ನೀಡಲಾಗಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





