Breaking News

ಅಗ್ನಿಪಥ ಪ್ರತಿಭಟನೆ : ಸಾರ್ವಜನಿಕ ಆಸ್ತಿಗೆ ಆಗಿರುವ ನಷ್ಟವನ್ನು ಪ್ರತಿಭಟನಕಾರರಿಂದಲೇ ವಸೂಲಿ


ವಾರಾಣಸಿ: ಅಗ್ನಿಪಥ ವಿರುದ್ಧದ ಪ್ರತಿಭಟನೆಯ ವೇಳೆ ಸಾರ್ವಜನಿಕ ಆಸ್ತಿಗೆ ಆಗಿರುವ ನಷ್ಟವನ್ನು ಪ್ರತಿಭಟನಕಾರರಿಂದಲೇ ವಸೂಲಿ ಮಾಡಲು ಸ್ಥಳೀಯ ಆಡಳಿತ ನಿರ್ಧರಿಸಿದೆ. ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿದ್ದವರನ್ನು ಗುರುತಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ.

ಜಿಲ್ಲಾಧಿಕಾರಿ ಕೌಶಲ್ ರಾಜ್‌ ಶರ್ಮಾ ಅವರು, ‘ಜೂನ್‌ 17ರಂದು ನಡೆದಿದ್ದ ಪ್ರತಿಭಟನೆ ವೇಳೆ 36 ಬಸ್‌ಗಳಿಗೆ ಬೆಂಕಿ ಹಚ್ಚಲಾಗಿತ್ತು. ಒಟ್ಟು ₹ 12.97 ಲಕ್ಷ ನಷ್ಟವಾಗಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಈವರೆಗೆ 27 ಜನರನ್ನು ಬಂಧಿಸಲಾಗಿದೆ. ಉಳಿದವರನ್ನು ಗುರುತಿಸುವ ಕಾರ್ಯ ನಡೆದಿದೆ’ ಎಂದು ತಿಳಿಸಿದರು. ಯುವಜನರು ಇಂತಹ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಲ್ಲಿ, ಭವಿಷ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅವಕಾಶ ಕಳೆದುಕೊಳ್ಳಲಿದ್ದಾರೆ. ಅಲ್ಲದೆ, ಆಗಿರುವ ನಷ್ಟವನ್ನು ಅವರೇ ಭರಿಸಬೇಕಾಗುತ್ತದೆ ಎಂದು ತಿಳಿಸಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *