ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಇಡಿ ವಿಚಾರಣೆ ಕೇವಲ 4 ಗಂಟೆಯಲ್ಲಿ ನಡೆಯಬೇಕಾದ ವಿಚಾರಣೆ ಆದರೆ ಇಷ್ಟು ದಿನ ವಿಚಾರಣೆ ಹೆಸರಿನಲ್ಲಿ ರಾಹುಲ್ ಗಾಂಧಿ ಕಿರುಕುಳ ನೀಡುತ್ತಿದೆ. ಈ ಹಿಂದೆಯೇ ನ್ಯಾಷನಲ್ ಹೆರಾಲ್ಡ್ ಹಗರಣ ಪ್ರಕರಣ ಮುಗಿದು ಹೋಗಿದೆ. ಆದರೆ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಸಿದ್ದರಾಮಯ್ಯ ಎಐಸಿಸಿ ಕಚೇರಿಗೆ ಕಾರಿನಲ್ಲಿ ತೆರಳುವಾಗ ದೆಹಲಿ ಪೊಲೀಸರು ತಡೆಇದ್ದಾರೆ. ಈ ವೇಳೆ ಕಾರ್ಯಕರ್ತರು ಸಿದ್ದರಾಮಯ್ಯ ಜೊತೆಗೆ ಹೋಗಲು ಯತ್ನಿಸಿದ್ದಾರೆ. ಈ ವಳೆ ಮನವರಿಕೆ ಮಾಡಿದ ಬಳಿಕ ಸಿದ್ದರಾಮಯ್ಯ ಅವರ ಕಾರನ್ನು ಪೊಲೀಸರು ಬಿಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





