ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ದೆಹಲಿಗೆ ತೆರಳಲಿದ್ದು, ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ನೆನೆಗುದಿಗೆ ಬಿದ್ದಿರುವ ಸಂಪುಟ ಕಸರತ್ತಿನ ಬಗ್ಗೆ ಚರ್ಚೆ ನಡೆಸುವ ನಿರೀಕ್ಷೆಯಿದೆ. ಶುಕ್ರವಾರ ರಾಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬೊಮ್ಮಾಯಿ ಅವರನ್ನು ದೆಹಲಿಗೆ ಆಹ್ವಾನಿಸಲಾಗಿದೆ. ಇದೇ ವೇಳೆ ಅವಕಾಶ ಸಿಕ್ಕರೆ ಬೊಮ್ಮಾಯಿ ಅವರು ಪಕ್ಷದ ವರಿಷ್ಠರನ್ನು ಕಂಡು ಸಂಪುಟ ಕಸರತ್ತಿನ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





