Breaking News

ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಿವೇಶನ ವಿತರಣೆ



ಬೆಂಗಳೂರು: ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ನೀಡಲಾಯಿತು.ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬುಧವಾರ ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ನಲ್ಲಿರು ನಿವೇಶನದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಯಿತು.ನಂತರ ಬಿಡಿಎ ಅಧ್ಯಕ್ಷರು ಮತ್ತು ಆಯುಕ್ತರು ಪರಿಸರ ಪ್ರೇಮಿ, ಶತಾಯುಷಿ ತಿಮ್ಮಕ್ಕ ಅವರನ್ನು ಸನ್ಮಾನಿಸಿ ನಿವೇಶನದ ನೋಂದಣಿ ಪತ್ರವನ್ನು ವಿತರಿಸಿದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *