Breaking News

ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು : ಆಸ್ಪತ್ರೆ ಮೇಲೆ ಕಲ್ಲು ತೂರಾಟ


ಮೈಸೂರು: ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಮೃತನ ಸ್ನೇಹಿತರು ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಸಈ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ. ಯುವಕ ಇಮಾನ್ ವಿಲ್ ಕರುಳು ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ. ಶಸ್ತ್ರಚಿಕಿತ್ಸೆ ವೇಳೆ ಬಿಪಿ ಲೋ ಆಗಿ ಇಮಾನ್​ಗೆ ಹೃದಯಾಘಾತವಾಗಿದೆ. ಹೆಚ್ಚಿನ ಚಿಕಿತ್ಸೆಗೆಂದು ಮೈಸೂರಿಗೆ ಸಾಗಿಸುವಾಗ ಯುವಕ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.

ಯುವಕನ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವೆಂದು ಆರೋಪಿಸಿ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸೇಂಟ್ ಮೇರಿಸ್ ಆಸ್ಪತ್ರೆಗೆ ನುಗ್ಗಿ ಮೃತನ ಸ್ನೇಹಿತರು ಕಲ್ಲು ತೂರಾಟ ಮಾಡಿದ್ದಾರೆ. ಯುವಕರು ದಾಂಧಲೆ ನಡೆಸುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *