Breaking News

777 ಚಾರ್ಲಿ ಸಿನಿಮಾ ವಿಕ್ಷೀಸಿದ ರಜನಿಕಾಂತ್


ಸ್ಯಾಂಡಲ್‌ವುಡ್‌ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಾರ್ಲಿ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಪ್ರೇಕ್ಷಕರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.

777 ಚಾರ್ಲಿ ಸಿನಿಮಾಗೆ ಸಿನಿ ಗಣ್ಯರು ಸಹ ರಕ್ಷಿತ್ ಸಿನಿಮಾಗೆ ಫಿದಾ ಆಗಿದ್ದಾರೆ. ಸ್ಯಾಂಡಲ್‌ವುಡ್ ಮಾತ್ರವಲ್ಲದೇ ಪರಭಾಷೆಯ ಗಣ್ಯರು ಚಾರ್ಲಿಯನ್ನು ಮೆಚ್ಚಿಕೊಂಡಿದ್ದಾರೆ. ಧರ್ಮ ಮತ್ತು ಚಾರ್ಲಿಯ ಭಾವನಾತ್ಮಕ ಕಥೆಗೆ ಪ್ರತಿಯೊಬ್ಬರಿಗೂ ಇಷ್ಟವಾಗಿದೆ.

ಈಗಾಗ್ಲೆ 777 ಚಾರ್ಲಿ ಸಿನಿಮಾವನ್ನ ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಸಾಕಷ್ಟು ಮಂದಿ ವೀಕ್ಷಿಸಿದ್ದು ಮೆಚ್ಚುಗೆ ಸೂಚಿಸಿದ್ದಾರೆ. ಬಾಕ್ಸ್ ಆಫೀಸ್‌ನಲ್ಲಿ ಚಾರ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಈ ಸಿನಿಮಾಗೆ ಎಲ್ಲಾ ಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ರಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 777 ಚಾರ್ಲಿ ವೀಕ್ಷಿಸಿದ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್ ರಕ್ಷಿತ್ ಶೆಟ್ಟಿಗೆ ಕರೆ ಮಾಡಿದ್ದು, ಸಿನಿಮಾದ ಬಗ್ಗೆ ಹಾಡಿಹೊಗಳಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *