ತುಮಕೂರು: ಮುಂದಿನ ಚುನಾವಣೆಯನ್ನು ನಾವು ಎದುರಿಸುತ್ತೇವೆ ಹೊರತು ಯಾವ ಆಪರೇಷನ್ ಮಾಡುವುದಿಲ್ಲ, ಜನರ ಆಯ್ಕೆಯ ಮೇಲೆ ಎಲ್ಲಾ ನಿರ್ಧಾರವಾಗಿದೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಕೊರಟಗೆರೆಯಲ್ಲಿ ಮಾತನಾಡಿದ ಅವರು, ಜನರ ಮೇಲೆ ನಮಗೆ ವಿಶ್ವಾಸವಿದೆ. 2023ರಲ್ಲಿ ಜನ ನಮ್ಮನ್ನೇ ಆಯ್ಕೆ ಮಾಡುತ್ತಾರೆಂಬ ವಿಶ್ವಾಸವಿದೆ. ಯಾವುದೇ ಕಾರಣಕ್ಕೂ ಕರ್ನಾಟಕ ಇಬ್ಭಾಗ ಆಗಲು ಬಿಡುವುದಿಲ್ಲ, ಯಾವುದೋ ಒಂದು ಅಸಮಾಧಾನಕ್ಕೆ ಕರ್ನಾಟಕವನ್ನು ಹೊಡೆಯುವಂತಹ ಕೆಲಸವನ್ನು ಮಾಡಬಾರದು ಎಂದು ಹೇಳಿದರು.
ಪಠ್ಯಪುಸ್ತಕ ಹಿಂಪಡೆಯುವ ವಿಚಾರದ ಬಗ್ಗೆ ಮಾತನಾಡಿದ ಅವರು, ಇದರಲ್ಲಿ ಹಠ ಮಾಡುವಂತಹದ್ದು ಏನು ಇಲ್ಲ.ಬಸವಣ್ಣನವರು ಯಾರು, ಏನು ಅಂತ ಅವರ ಚಿಂತನೆಗಳ ಬಗ್ಗೆ ಎಲ್ಲರಿಗೂ ಗೊತ್ತಿದೆ. ಅಂಬೇಡ್ಕರ್ ಅವರು ಸಂವಿಧಾನವನ್ನು ಬರೆದಿದ್ದಾರೆ. ಅವರ ಚಿಂತನೆಗಳನ್ನು ಜನಸಮುದಾಯಕ್ಕೆ ತಿಳಿಸಬೇಕು. ಇದರಲ್ಲಿ ರಾಜಕೀಯ ಮಾಡಲು ಏನಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





