Breaking News

ವಿಭಜಕಕ್ಕೆ ಗುದ್ದಿದ ಪರಿಣಾಮ ಕಾರಿನಲ್ಲಿದ್ದ 3 ಎಂಬಿಬಿಎಸ್​ ವಿದ್ಯಾರ್ಥಿಗಳು ಸಜೀವ ದಹನ

ಮೀರತ್ (ಹರಿಯಾಣ): ರಸ್ತೆ ಮಧ್ಯೆ ಅಡ್ಡಲಾಗಿ ಹಾಕಲಾಗಿದ್ದ ವಿಭಜಕಕ್ಕೆ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ಮೂವರು ಎಂಬಿಬಿಎಸ್​ ವಿದ್ಯಾರ್ಥಿಗಳು ಸಜೀವವಾಗಿ ಸುಟ್ಟುಹೋಗಿರುವ ಭೀಕರ ಘಟನೆ ಹರಿಯಾಣದ ಮೀರತ್-ಝಜ್ಜರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರೋಹ್ಟಕ್​ನ ಪಿಜಿಐನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಯುವಕರು ರೋಹ್ಟಕ್​ನಿಂದ ಹರಿದ್ವಾರಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಒಟ್ಟು ಆರು ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಾಲಕ ವೇಗವಾಗಿ ಕಾರನ್ನು ಓಡಿಸುತ್ತಿದ್ದ. ರಾಷ್ಟ್ರೀಯ ಹೆದ್ದಾರಿ-44ರ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಕಲ್ಲಿನ ಬ್ಯಾರಿಕೇಡ್‌ಗಳನ್ನು ರಸ್ತೆ ಮಧ್ಯೆ ಅಡ್ಡಲಾಗಿ ಅಳವಡಿಸಲಾಗಿತ್ತು. ಕತ್ತಲಲ್ಲಿ ಬ್ಯಾರಿಕೇಡ್‌ ಕಾಣಿಸಲಿಲ್ಲ. ವೇಗವಾಗಿದ್ದ ಕಾರು ಅದಕ್ಕೆ ಡಿಕ್ಕಿ ಹೊಡೆದಿದೆ.

ಈ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ಆರು ಮಂದಿ ವಿದ್ಯಾರ್ಥಿಗಳ ಪೈಕಿ ಮೂವರು ಅಲ್ಲಿಯೇ ಸುಟ್ಟು ಕರಕಲಾದರೆ ಇನ್ನು ಮೂವರ ಸ್ಥಿತಿ ಗಂಭೀರವಾಗಿದೆ.ರಸ್ತೆಗೆ ಅಡ್ಡಲಾಗಿ ಕಲ್ಲಿನ ಬ್ಯಾರಿಕೇಡ್​ಗಳನ್ನು ಯಾವುದೇ ಮುನ್ಸೂಚನೆ ಇಲ್ಲದೇ ಅಳವಡಿಸಿದ ಅಧಿಕಾರಿಗಳು ಮತ್ತು ಕಾಮಗಾರಿ ಗುತ್ತಿಗೆ ಪಡೆದ ಪಂನಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *