Breaking News

ಹಿರಿಯ ಲೇಖಕ ಡಾ ಗುರುಲಿಂಗ ಕಾಪಸೆ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ

ಕೇಂದ್ರ ಸಾಹಿತ್ಯ ಅಕಾಡೆಮಿಯು ನೀಡುವ ಅನುವಾದ ಪುಸ್ತಕ ಪ್ರಶಸ್ತಿಗೆ ಹಿರಿಯ ಲೇಖಕರಾದ ಡಾ ಗುರುಲಿಂಗ ಕಾಪಸೆ ಅವರು ಭಾಜನರಾಗಿದ್ದಾರೆ.

ಡಾ ಕಾಪಸೆ ಅವರು ಮರಾಠಿಯಿಂದ ಕನ್ನಡಕ್ಕೆ ಅನುವಾದಿಸಿದ ವಿ ಸ ಖಾಂಡೇಕರ್ ಅವರ ‘ಒಂದು ಪುಟದ ಕಥೆ‘ ಯು ಈ ಸಲದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿಗೆ ಆಯ್ಕೆಯಾಗಿದೆ.’ಒಂದು ಪುಟದ ಕಥೆ’ (ಮೂಲದಲ್ಲಿ ‘ಏಕಾ ಪಾನಾಚಿ ಗೋಷ್ಠ)ಯು ಖಾಂಡೇಕರ್ ಅವರ ಆತ್ಮಕಥೆ ಯಾಗಿದೆ.

ಖಾಂಡೇಕರ್ ಅವರು ಮರಾಠಿಯ ಮೊದಲ ಜ್ಞಾನಪೀಠ ಪ್ರಶಸ್ತಿ ಪಡೆದ ಲೇಖಕರು. ಅವರ ‘ಯಯಾತಿ ‘ ಎಂಬ ಕೃತಿಗೆ ಜ್ಞಾನಪೀಠ ಪ್ರಶಸ್ತಿಯು ಬಂದಿತ್ತು.

ಡಾ ಕಾಪಸೆಯವರು ಅನುವಾದಿಸಿದ ಖಾಂಡೇಕರ್ ಅವರ ಆತ್ಮಕಥೆಯು ಕಳೆದ ಶತಮಾನದ ಭಾರತದ ಅದರಲ್ಲಿಯೂ ಮಹಾರಾಷ್ಟದ ಕೊಂಕಣ ಭಾಗದ ಸಾಮಾಜಿಕ, ಆರ್ಥಿಕ, ರಾಜಕೀಯ ,ಜಾತೀಯ ಸ್ಥಿತಿಗತಿಗಳ ಸಮಗ್ರವಾದ ವಿವರಣೆ ನೀಡುತ್ತದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *