ಇಂಗ್ಲೆಂಡ್ ನ ಲೀಸೆಸ್ಟನ್ ನಲ್ಲಿ ನಡೆದ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಶನಿವಾರ ರ್ಯಾಪಿಡ್ ಟೆಸ್ಟ್ ನಡೆಸಲಾಗಿದ್ದು, ಕೋವಿಡ್ ಸೋಂಕು ದೃಢಪಟ್ಟಿದೆ. ಹೀಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವೈದ್ಯಕೀಯ ತಂಡದೊಂದಿಗೆ ಪ್ರತ್ಯೇಕವಾಗಿ ಇರಿಸಲಾಗಿದೆ. ಶನಿವಾರ ನಡೆಸಿದ ರ್ಯಾಪಿಡ್ ಆಂಟಿಜೆನ್ ಟೆಸ್ಟ್ (ಆರ್ಎಟಿ) ನಂತರ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರು ಪ್ರಸ್ತುತ ತಂಡದ ಹೋಟೆಲ್ನಲ್ಲಿ ಪ್ರತ್ಯೇಕವಾಗಿದ್ದಾರೆ ಮತ್ತು ಬಿಸಿಸಿಐ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ’ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





