ಬೆಂಗಳೂರು: ಎಸೆಸೆಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣ ರಾಗಿರುವ ಅಭ್ಯರ್ಥಿಗಳಿಗೆ ರಾಜ್ಯಾದ್ಯಂತ ಜೂ.27ರಿಂದ ಜು.4ರ ವರೆಗೆ ಪೂರಕ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಪರೀಕ್ಷೆಗೆ 11,415 ಶಾಲೆಗಳಿಂದ 63,363 ವಿದ್ಯಾರ್ಥಿ ಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸಹಿತ ಒಟ್ಟಾರೆ 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪೈಕಿ 343 ಸಾಮಾನ್ಯ ಮತ್ತು 80 ಖಾಸಗಿ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





