Breaking News

ಸರಣಿ ಅಪಘಾತ : 8 ವಾಹನಗಳು ಸಂಪೂರ್ಣ ಜಖಂ


ಬೆಂಗಳೂರು: ನಗರದ ಹೊರವಲಯದ ಟೋಲ್ ಫ್ಲಾಜಾ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, 8 ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.

ಹೊಸಕೋಟೆ ಬಳಿಯ ಟೋಲ್ ಫ್ಲಾಜಾ ಬಳಿ ಈ ಅಪಘಾತ ಸಂಭವಿಸಿದ್ದು, ಎರಡು ಬಸ್ ಗಳು, ಒಂದು ಲಾರಿ, ಒಂದು ಗೂಡ್ಸ್ ಹಾಗೂ ಮೂರು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಸರಣಿ ಅಪಘಾತದಲ್ಲಿ 8 ವಾಹನಗಳು ನಜ್ಜುಗುಜ್ಜಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅದೃಷ್ಟವಶಾತ್ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *