Breaking News

ಚಾರ್​ಧಾಮ್ ಯಾತ್ರೆಯಲ್ಲಿ ಇದುವರೆಗೆ 200ಕ್ಕೂ ಹೆಚ್ಚು ಜನರು ಸಾವು


ಡೆಹರಾಡೂನ್ :  ಉತ್ತರಾಖಂಡದ ಚಾರ್​ಧಾಮ್ ಯಾತ್ರೆಯಲ್ಲಿ ಇದುವರೆಗೆ 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಉತ್ತರಖಂಡ್ ಸರ್ಕಾರ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ. ಇದಲ್ಲಿ ಹೆಚ್ಚಿನವರು ವೃದ್ದರೇ ಆಗಿದ್ದು, ವೈದ್ಯಕೀಯ ಚಿಕಿತ್ಸಾ ಆಹಾರದ ಕೊರತೆ ಇದ್ದವರೇ ಆಗಿದ್ದಾರೆ ಎಂದು ತಿಳಿಸಿದೆ.

ಭಾರೀ ಮಳೆ ಮತ್ತು ಅಲ್ಲಿಲ್ಲಿನ ಭೂಕುಸಿತಗಳು ಸುಗಮ ಯಾತ್ರೆ ನಡೆಸುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಕೇದಾರನಾಥ ಯಾತ್ರೆ ಮಾರ್ಗದಲ್ಲಿ 95, ಬದರಿನಾಥ ಧಾಮದಲ್ಲಿ 51, ಗಂಗೋತ್ರಿಯಲ್ಲಿ 13 ಮತ್ತು ಯಮುನೋತ್ರಿಯಲ್ಲಿ 42 ಯಾತ್ರಿಕರು ಸಾವನ್ನಪ್ಪಿದ್ದಾರೆ.

ಇಲಾಖೆಯು ಮೊದಲ ಬಾರಿಗೆ ಒಂಬತ್ತು ಸ್ಥಳಗಳಲ್ಲಿ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆ ಸಲಾಗಿದೆ. ಕರಪತ್ರಗಳು ಮತ್ತು ಇತರ ವಿಧಾನಗಳ ಮೂಲಕ ನಿಯಮಿತವಾಗಿ ಆರೋಗ್ಯ ಸಲಹೆಗಳನ್ನು ನೀಡಲಾಗುತ್ತಿದೆ. ಯಾತ್ರಾರ್ಥಿಗಳಿಗೆ, ವಿಶೇಷವಾಗಿ ವೃದ್ಧರಿಗೆ ಯಾತ್ರೆಯಲ್ಲಿನ ಅಪಾಯಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಚಾರ್ ಧಾಮ್ ಮಾರ್ಗಗಳಲ್ಲಿ 12 ವೈದ್ಯರನ್ನು ನಿಯೋಜಿಸಲಾಗಿದೆ. ಅಸ್ವಸ್ಥ ಯಾತ್ರಾರ್ಥಿಗಳನ್ನು ತುರ್ತು ಸಂದರ್ಭದಲ್ಲಿ ಸಕಾಲಿಕ ಚಿಕಿತ್ಸೆಗಾಗಿ ಹೆಲಿ-ಆಂಬುಲೆನ್ಸ್ ಮೂಲಕ ಉನ್ನತ ವೈದ್ಯಕೀಯ ಕೇಂದ್ರಗಳಿಗೆ ಕರೆದೊಯ್ಯಲಾಗುತ್ತಿದೆ.

ಇಲ್ಲಿಯವರೆಗೆ ಸಾವಿಗೆ ಪ್ರಮುಖವಾಗಿ ಹೃದಯ ಸಂಬಂಧಿ ಕಾಯಿಲೆಗಳು ಕಾರಣ. ವೈದ್ಯಕೀಯ ಇತಿಹಾಸ ಹೊಂದಿರುವ ಯಾತ್ರಾರ್ಥಿಗಳಿಗೆ ಮುಂದಿನ ಪ್ರಯಾಣವನ್ನು ಕೈಗೊಳ್ಳದಂತೆ ಮನವೊಲಿಸಲಾಗುತ್ತಿದೆ ಅವರು ತಮ್ಮ ಪ್ರಯಾಣವನ್ನು ಮುಂದುವರಿಸಲು ಸದೃಢವಾಗಿದ್ದರೆ ಅವರಿಂದ ತೀರ್ಮಾನ ತೆಗೆದುಕೊಳ್ಳಲಾಗುತ್ತಿದೆ ಎಂದು ಎಂದು ಉತ್ತರಾಖಂಡದ ಮಹಾನಿರ್ದೇಶಕಿ (ಆರೋಗ್ಯ) ಶೈಲ್ಜಾ ಭಟ್ ತಿಳಿಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *