Breaking News

ಚಾರ್ಜ್‌ ಶೀಟ್‌ ನಲ್ಲಿ ರಾಜಕಾರಣ ಮಾಡುತ್ತಿದ್ದಾರೆ : ಡಿಕೆಶಿ


ತುಮಕೂರು: ತುಂಬಾ ತಡವಾಗಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಚಾರ್ಜ್‌ ಶೀಟ್‌ ಸಲ್ಲಿಕೆಯಾಗಿದೆ. ಇದು ಮೂರ್ನಾಲ್ಕು ವರ್ಷದ ಹಿಂದೆಯೇ ಆಗಬೇಕಾಗಿತ್ತು. ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಇನ್ನೂ ಚಾರ್ಜ್‌ಶೀಟ್‌ ನೋಡಿಲ್ಲ. ಕಾರಾಗೃಹದಲ್ಲಿ ಇರಬೇಕಾದರೆ, ಜೈಲಿನಿಂದ ಹೊರ ಬಂದ ಆರು ತಿಂಗಳ ಒಳಗಡೆ ಹಾಕಬೇಕಿತ್ತು ಎಂದರು. ಪರಿಷ್ಕೃತ ಪಠ್ಯಪುಸ್ತಕದ ಮೂಲಕ ಸಂವಿಧಾನ ಶಿಲ್ಪಿ ಅಂಬೇಡ್ಕರ್‌, ಬಸವಣ್ಣ, ಶಂಕರಾಚಾರ್ಯ, ಕುವೆಂಪು, ನಾರಾಯಣಗುರು ಸೇರಿದಂತೆ ಅನೇಕ ಮಹನೀಯರಿಗೆ ಅವಮಾನ ಮಾಡಿದ್ದಾರೆ. ಇದನ್ನು ಸಹಿಸಿಕೊಂಡು ಇರಲು ಸಾಧ್ಯವೇ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಸ್ವಾಮೀಜಿ ಇದ್ದರು ಎನ್ನುವ ಕಾರಣಕ್ಕೆ ಸುಮ್ಮನಿದ್ದೆ, ಬೇರೆ ಕಡೆ ಆದರೆ ಪಠ್ಯಪುಸ್ತಕ ಹರಿದು ಹಾಕುವುದಲ್ಲ ಸುಡುತ್ತಿದ್ದೆ. ಮುಂದಕ್ಕೂ ಅಂತ ಕಾಲ ಬರುತ್ತದೆ ಎಂದು ಹೇಳಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *