ರಾಯಚೂರು: ಬೈಕ್ ಗೆ ನೀರಿನ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ ನಗರದ ಹೊರವಲಯದ ಮರ್ಚೇಡ್ ಕ್ರಾಸ್ ಬಳಿ ಘಟನೆ ನಡೆದಿದೆ.
ಮೃತರನ್ನು ರಾಯಚೂರು ತಾಲೂಕಿನ ತಿಮ್ಮಾಪುರ ಗ್ರಾಮದ ತಿಪ್ಪಣ್ಣ(18) ಹಾಗೂ ಲಿಂಗಪ್ಪ(18) ಎಂದು ಗುರುತಿಸಲಾಗಿದೆ. ಉದಯ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್ ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ದೇಹಗಳು ಛಿದ್ರಗೊಂಡಿದ್ದು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





