Breaking News

ಕೋವಿಡ್ ಕುರಿತು ಹೊಸ ನಿಯಮ ಜಾರಿಗೆ



ಬೆಂಗಳೂರು : ರಾಜ್ಯಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಮತ್ತು ಒಮಿಕ್ರಾನ್ ಉಪತಳಿಗಳ ಪತ್ತೆಯಾಗುತ್ತಿರುವ  ಹಿನ್ನೆಲೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರು ಆರೋಗ್ಯ ಇಲಾಖೆಗೆ ಶಿಫಾರಸು ಮಾಡಿದ್ದಾರೆ.

ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಸಭೆ ನಡೆಸಿದ್ದು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ವಿವರವಾದ ಚರ್ಚೆ ನಡೆಸಿದರು ಮತ್ತು ಮಾಸ್ಕ್ ಧರಿಸದವರಿಗೆ ಸರ್ಕಾರಿ ಸಂಸ್ಥೆಗಳನ್ನು ಪ್ರವೇಶಿಸಲು ಅವಕಾಶ ನೀಡಬಾರದು ಎಂದು ಶಿಫಾರಸು ಮಾಡಿದರು. ಶಿಫಾರಸುಗಳನ್ನು ಸರ್ಕಾರಕ್ಕೆ ರವಾನಿಸಲಾಗಿದ್ದು, ವಾರದೊಳಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *