ಬೆಂಗಳೂರು: ರಾಜ್ಯ ಬಿಜೆಪಿಯ ಮಾಧ್ಯಮ ವಕ್ತಾರ ಚಂದ್ರಶೇಖರ್ ನಿಧನರಾಗಿದ್ದಾರೆ. ಹಠಾತ್ ಹೃದಯಾಘಾತದಿಂದ ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ.
ಸೋಮವಾರ ಕೆ.ಆರ್.ಮಾರ್ಕೆಟ್ ಬಳಿ ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದಾಗ ಚಂದ್ರಶೇಖರ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಜಾಗತಿಕ ಮತ್ತು ರಾಷ್ಟ್ರೀಯ ವಿಷಯಗಳ ಕುರಿತು ಪಾಂಡಿತ್ಯ ಹೊಂದಿದ್ದ ಚಂದ್ರಶೇಖರ್ ಅವರು ಮಾಧ್ಯಮ ವಕ್ತಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸದ್ಯ ಅವರ ಪಾರ್ಥಿವ ಶರೀರವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





