ಬಂಟ್ವಾಳ(ದಕ್ಷಿಣ ಕನ್ನಡ): ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಕೊಡಾಜೆ ಗಣೇಶ್ ನಗರದಲ್ಲಿ ಹಾಡಹಗಲೇ ಮಹಿಳೆಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಸೋಮವಾರ ನಡೆದಿದೆ.ಶಕುಂತಳಾ ಮೃತ ಮಹಿಳೆಯಾಗಿದ್ದು, ಆರೋಪಿ ಶ್ರೀಧರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಶಕುಂತಳಾ ಸುಮಾರು 5 ವರ್ಷಗಳಿಂದ ಪುತ್ತೂರಿನ ಕೊಂಬೆಟ್ಟುವಿನಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು. ಕಳೆದ ಒಂದು ವರ್ಷದಿಂದ ಸ್ಕೂಟರ್ನಲ್ಲಿ ಪುತ್ತೂರಿಗೆ ಹೋಗಿ ಬರುತ್ತಿದ್ದರು. ಕೆಲ ತಿಂಗಳುಗಳ ಹಿಂದೆ ಯಮನಾಜೆ ಎಂಬಲ್ಲಿನ ನಿವಾಸಿ ಶ್ರೀಧರ್ ಮಹಿಳೆಯ ಮನೆ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನಂತೆ. ಬಳಿಕ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಇದೇ ಕಾರಣಕ್ಕೆ ಶ್ರೀಧರ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೊಡಾಜೆಯಲ್ಲಿ ಆರೋಪಿಯು ಮಹಿಳೆಗೆ ಏಕಾಏಕಿ ಚೂರಿಯಿಂದ ಇರಿದಿದ್ದಾನೆ. ಗಾಯಗೊಂಡ ಆಕೆಯನ್ನು ಮಾಣಿಯಿಂದ ಆಯಂಬುಲೆನ್ಸ್ ಮೂಲಕ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಹಿಳೆಯ ಪತಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಈ ಕೃತ್ಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಋಷಿಕೇಶ್ ತಿಳಿಸಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news





