ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಜುಲೈ 1 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಕರ್ನಾಟಕದ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





