ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಏಕಾಂಗಿತನ ಕಾಡುತ್ತಿದೆ ಎಂದು ಬಿಜೆಪಿ ವ್ಯಂಗ್ಯ
ವಾಡಿದೆ.
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಬಣ ರಾಜಕೀಯವನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರೆಸ್‌ನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೇ. ಡಿಕೆಶಿ ಅವರಿಂದ ಸಿಎಂ ಸ್ಥಾನಕ್ಕೆ ಪ್ರಬಲ ಲಾಬಿ ಎದುರಾಗುತ್ತಿದೆ. #SidduVsDKS ಕಲಹ ಈಗ ಬೇರೆಯೇ ಹಂತ ತಲುಪುತ್ತಿದೆ. ಸಿದ್ದರಾಮಯ್ಯ ವಿರೋಧಿ ಪಾಳಯ ಜಾಗೃತಗೊಂಡಿದೆ’ ಎಂದು ಹೇಳಿದೆ.
‘ಕಾಂಗ್ರೆಸ್‌ನಲ್ಲಿ ಡಿಕೆಶಿ ವರ್ಚಸ್ಸು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಡಿಕೆಶಿ ವರ್ಚಸ್ಸಿನ ಪ್ರಭಾವ ತಗ್ಗಿಸಲು ಸಿದ್ದರಾಮಯ್ಯ ಹೆಣಗಾಡುತ್ತಿದ್ದಾರೆ. ಇದಕ್ಕಾಗಿ ಶಕ್ತಿ ಪ್ರದರ್ಶನ ಸಮಾರಂಭದ ಸಿದ್ಧತೆ ಆರಂಭವಾಗಿದೆ. ಅಭಿಮಾನಿ ಬಳಗದ ಈ ಸಮಾರಂಭ ಯಾರಿಗೆ ಠಕ್ಕರ್ ನೀಡಲು ಆಯೋಜಿಸಲಾಗಿದೆ’ ಎಂದು ಬಿಜೆಪಿ ಗುಡುಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





