Breaking News

ಕರ್ತವ್ಯ ನಿರತ ಪೊಲೀಸ್​ ಅಧಿಕಾರಿ ಸಾವು

ಮೈಸೂರು: ಕರ್ತವ್ಯ ನಿರತ ಪೊಲೀಸ್​ ಅಧಿಕಾರಿ ಏಕಾಏಕಿ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಸಬ್ ಇನ್ಸ್‌ಪೆಕ್ಟರ್ ದೊಡ್ಡೇಗೌಡ ಮೃತ ದುರ್ದೈವಿ. ಜಿಲ್ಲೆಯ ಸಾಲಿಗ್ರಾಮ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿರುವ ದೊಡ್ಡೇಗೌಡ ಕರ್ತವ್ಯದ ವೇಳೆ ತೀವ್ರ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಇತರ ಸಿಬ್ಬಂದಿ ಆರೈಕೆ ಮಾಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ದುರಾದೃಷ್ಟವಶಾತ್​ ದೊಡ್ಡೇಗೌಡ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *