Breaking News

ಒಂದೇ ಕುಟುಂಬದ 9 ಜನ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್


ಪುಣೆ: ಒಂದೇ ಕುಟುಂಬದ 9 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈವರೆಗೂ ಆತ್ಮಹತ್ಯೆ ಎಂದೇ ಹೇಳಲಾಗಿದ್ದ ಪ್ರಕರಣಕ್ಕೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿದ್ದ ಕುಟುಂಬದ ಸದ್ಯಸ್ಯರ ಸಾವು ಆತ್ಮಹತ್ಯೆ ಅಲ್ಲ,ಬದಲಾಗಿ ಇದು ಕೊಲೆ ಎಂದು ಪೊಲೀಸರ ತನಿಖೆಯಿಂದ ಬಯಲಾಗಿದೆ.ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊಂದಿರುವ 25 ಜನರ ಪೈಕಿ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ.ಆತ್ಮಹತ್ಯೆ ಮಾಡಿಕೊಂಡ ಕುಟುಂಬವು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಆರೋಪಿಗಳಿಂದ ಹಣ ಸಾಲವಾಗಿ ಪಡೆದಿತ್ತು. ಈ ಸಾಲ ಹಿಂತಿರುಗಿಸಿಲ್ಲ ಎಂದು ಕುಟುಂಬದ ಸದಸ್ಯರಿಗೆ ವಿಷ ನೀಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಲ ಪಡೆದ ವನಮೋರೆ ಕುಟುಂಬದವರನ್ನು ಆರೋಪಿಗಳು ಸಾಲ ಮರುಪಾವತಿಸುವಂತೆ ವಿಪರೀತ ಕಿರುಕುಳ ನೀಡುತ್ತಿದ್ದರು.ಇವರ ಕಿರುಕುಳದ ಕಾರಣದಿಂದಲೇ ವನಮೋರೆ ಕುಟುಂಬದವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಬಂಧಿತರಲ್ಲಿ ಕೆಲವರು ಈ ಮುನ್ನವೇ ಹಣಕಾಸು ಸಂಬಂಧಿತ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *