ಚೆನ್ನೈ: ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಇತ್ತೀಚಿಗೆ ಕೋವಿಡ್ -19 ಸೋಂಕಿನಿಂದ ವಿದ್ಯಾಸಾಗರ್ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ.
ವಿದ್ಯಾಸಾಗರ್ ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ನಟ ಶರತ್‌ಕುಮಾರ್ ಟ್ವಿಟರ್ ಮೂಲಕ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ವ್ಯಕ್ತಪಡಿಸಿ, ಮೀನಾ ಅವರ ಸ್ನೇಹಿತರು, ಅಭಿಮಾನಿಗಳು ಮತ್ತು ಕುಟುಂಬದ ಹಿತೈಷಿಗಳಿಗೆ ಈ ಸುದ್ದಿ ಆಘಾತವನ್ನುಂಟು ಮಾಡಿದೆ. ದುಃಖಿತ ಕುಟುಂಬದ ಜೊತೆಗಿರುತ್ತೇವೆ ಎಂದು ಹೇಳಿದ್ದಾರೆ.
ಕನ್ನಡ ಸೇರಿದಂತೆ ಬಹು ಭಾಷೆಗಳ ಸಿನಿಮಾಗಳಲ್ಲಿ ನಟಿಸಿರುವ ಮೀನಾ, 2009 ರಲ್ಲಿ ವಿದ್ಯಾಸಾಗರ್ ಅವರನ್ನು ವಿವಾಹವಾದರು, ದಂಪತಿಗೆ 11 ವರ್ಷದ ಮಗಳು ನೈನಿಕಾ ‘ತೇರಿ’ ಚಿತ್ರದಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





