Breaking News

ವಾಹನ , ಕಾರಿನ ಮಧ್ಯೆ ಡಿಕ್ಕಿ : 2 ಸಾವು


ಕಲಬುರಗಿ: ಗೂಡ್ಸ್​ ವಾಹನ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿಯ ಆಳಂದ ತಾಲೂಕಿನ ಚಿತಲಿ ಗ್ರಾಮದಲ್ಲಿ ನಡೆದಿದೆ.

ಆಳಂದದ ಬಾಳೇನಗಲ್ಲಿ ಜಾಫರ್ ಖಾಸೀಂ (27) ಹಾಗೂ ಗುಜರಾತ್ ಮೂಲದ ಜೋಧಾರಾಮ ಜಸ್ವಂತ್ (40) ಮೃತ ದುರ್ದೈವಿಗಳು. ಉಮರ್ಗಾದಿಂದ ಆಳಂದ ಪಟ್ಟಣಕ್ಕೆ ಬರುತ್ತಿದ್ದ ಕಾರು ಆಳಂದಿಂದ ಉಮರ್ಗಾಕ್ಕೆ ತೆರಳುತ್ತಿದ್ದ ಗೂಡ್ಸ್ ವಾಹನಕ್ಕೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಎರಡೂ ವಾಹನಗಳ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *