Breaking News

ಜುಲೈ 1ರಿಂದ 17ರವರೆಗೆ ಜನತಾ ಮಿತ್ರ ಕಾರ್ಯಕ್ರಮ


ಬೆಂಗಳೂರು: ಜುಲೈ 1ರಿಂದ 17ರವರೆಗೆ ಬೆಂಗಳೂರಿನಲ್ಲಿ 17 ದಿನಗಳ ಕಾಲ ಜೆಡಿಎಸ್ ಪಕ್ಷ ಹಮ್ಮಿಕೊಂಡಿರುವ ಜನತಾ ಮಿತ್ರ ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಪಕ್ಷದ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದರು.

ಜಲಧಾರೆಯಂತೆ ಜನತಾ ಮಿತ್ರ ಕಾರ್ಯಕ್ರಮವೂ ಯಶಸ್ವಿ ಆಗಬೇಕು. ರಾಜ್ಯದ ಕನ್ನಡಿಗರೆಲ್ಲಾ ನೆಲಮಂಗಲ ಸಮಾವೇಶದಲ್ಲಿ ಸೇರಿದಂತೆ ಬೆಂಗಳೂರು ಮಹಾನಗರದ ಜನತೆ ಜನತಾ ಮಿತ್ರ ಸಮಾವೇಶದಲ್ಲಿ ಸೇರಬೇಕು. ಅದಕ್ಕೆ ಅಗತ್ಯವಾದ ಎಲ್ಲ ಸಲಹೆ, ಸೂಚನೆಗಳನ್ನು ಮಾಜಿ ಮುಖ್ಯಮಂತ್ರಿಗಳು ನೀಡಿದರು.

ಜನತಾ ಮಿತ್ರ ವಾಹನವು ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಪ್ರತಿಯೊಂದು ವಾರ್ಡ್ ಗಳಿಗೂ ಹೋಗಬೇಕು. ಪಕ್ಷದ ಮುಖಂಡರೆಲ್ಲ ಪ್ರತ್ಯೇಕ ತಂಡಗಳಾಗಿ ಬೇರ್ಪಟ್ಟು ಸಂಚಾರ ಮಾಡಬೇಕು. ಎಲ್ಲ ವಾರ್ಡ್ ಗಳಲ್ಲಿಯೂ ಸಭೆಗಳನ್ನು ನಡೆಸಬೇಕು. ಅದಕ್ಕೆ ಅಗತ್ಯವಾದ ಎಲ್ಲ ಸೂಚನೆಗಳನ್ನು ಕುಮಾರಸ್ವಾಮಿ ಅವರು ಕೊಟ್ಟರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *