Breaking News

ಪಾಲಿಕೆ ಆವರಣದಲ್ಲಿ ಕ್ರಿಕೆಟ್ ಆಟವಾಡಿ ವಿನೂತನ ಪ್ರತಿಭಟನೆ

ಹುಬ್ಬಳ್ಳಿ : ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗಬೇಕಿದ್ದ ನೆಹರು ಮೈದಾನ ಈವರೆಗೆ ಅಭಿವೃದ್ಧಿ ಕಾಣದೇ ಯುವಕರು ಕ್ರೀಡಾಚಟುವಟಿಗಳಿಂದ ದೂರ ಉಳಿಯುವ ಪರಿಸ್ಥಿತಿ ಉಂಟಾಗಿದ್ದು, ಕೂಡಲೇ ನೆಹರು ಮೈದಾನದ ಕೆಲಸ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಹುಬ್ಬಳ್ಳಿಯ ಯುವಕರು ಪಾಲಿಕೆ ಆವರಣದಲ್ಲಿ ಕ್ರಿಕೆಟ್ ಬ್ಯಾಟ್, ಬಾಲ್ ಹಿಡಿದು ವಿನೂತನ ಪ್ರತಿಭಟನೆ ಮಾಡಿದರು.

ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಪ್ರಾಕ್ಟೀಸ್ ಮಾಡುವುದಕ್ಕೆ ನೆಹರು ಮೈದಾನ ಕೇಂದ್ರ ಸ್ಥಳವಾಗಿದೆ‌. ಕಳೆದ ಎರಡು ವರ್ಷಗಳಿಂದ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಮೈದಾನವನ್ನು ಮೇಲ್ದರ್ಜೆಗೆ ಏರಿಸಲು ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಆದರೆ ಈವರೆಗೆ ಮಾತ್ರ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ರಾಜೇಶ ಗಾಂವಕರ, ಬಸವರಾಜ ತೇರದಾಳ, ಶಿವಾನಂದ ಅಣವೇಕರ, ರಾಜು ಕೋರ್ಯನಮಠ, ವಿಷ್ಣು ಮಿಸ್ಕಿನ್ ಸೇರಿದಂತೆ ಮುಂತಾದವರು ಭಾಗಿಯಾಗಿದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *